ಕೋವಿಡ್-19 ಸೋಂಕಿತರಿಗಾಗಿಹಾಸಿಗೆ ಕಾಯ್ದಿರಿಸಿ: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಿಗೆ ಸೂಚನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರಿಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಈ ಸಂಬಂಧ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದು, ಸೋಂಕು ಲಕ್ಷಣ ಹೊಂದಿರುವವರು ಆಸ್ಪತ್ರೆಗೆ ಬಂದಾಗ ದಾಖಲಿಸಿಕೊಂಡು ಚಿಕಿತ್ಸೆ ನೀಡುವ ಅಗತ್ಯವಿದೆ. ಹಾಗಾಗಿ ಪ್ರತ್ಯೇಕ ಹಾಸಿಗೆಗಳನ್ನು ಕಾಯ್ದಿರಿಸುವಂತೆ ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಉಪಸಮಿತಿ (ರಾಜ್ಯ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣ) ಸಭೆ ನಿರ್ದೇಶನದಂತೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಎಚ್ – ಬ್ಲಾಕ್, ಕೆ.ಸಿ.ಜನರಲ್ ಆಸ್ಪತ್ರೆ, ಜಯನಗರ ಸಾರ್ವಜನಿಕ ಆಸ್ಪತ್ರೆ, ಸರ್ ಸಿ.ವಿ.ರಾಮನ್ ಸಾರ್ವಜನಿಕ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯಲ್ಲಿ ಕೋವಿಡ್ ವಾರ್ಡ್ಗಳನ್ನು ಕಾಯ್ದಿರಿಸಲು ಸೂಚಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ (ವೈದ್ಯಕೀಯ ಕಾಲೇಜುಗಳು ಸೇರಿದಂತೆ) ಕನಿಷ್ಠ 10 ಸಾಮಾನ್ಯ ಹಾಸಿಗೆಗಳು ಹಾಗೂ ತುರ್ತು ನಿಗಾ ಘಟಕದಲ್ಲಿ 5 (ಐಸಿಯು) ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಕಾಯ್ದಿರಿಸಲು ಸೂಚನೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!