ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ವಾರಂತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಮಾಡುವ ಸಾಧ್ಯತೆ ಇದೆ.
ಏ.19 ಕ್ಕೆ ಹೋಗಬೇಕಿದ್ದ ಜಮ್ಮು-ಕಾಶ್ಮೀರ ಪ್ರವಾಸವನ್ನು ಪ್ರಧಾನಿ ಮೋದಿ ಅವರು ರದ್ದು ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.
ಬಿಹಾರ ಚುನಾವಣೆ ಹೊತ್ತಲ್ಲೇ ಸಂಪುಟದಲ್ಲಿ ಬದಲಾವಣೆ ಸುದ್ದಿ ಕೇಳಿಬಂದಿದೆ. ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ ಇದೆ.