ವಸತಿ ನಿಲಯ ಈಗ ಕೋವಿಡ್‌ ಕೇಂದ್ರ: ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಸೂಚನೆ

ಹೊಸದಿಗಂತ ವರದಿ, ಮಂಡ್ಯ:

ಕೋವಿಡ್ ಸೆಂಟರ್‌ಗಳನ್ನಾಗಿ ಮಾರ್ಪಡಿಸಿರುವ ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಸೂಕ್ತ ಸೌಲಭ್ಯ ಕಲ್ಪಿಸುವಂತೆ ಜಿ.ಪಂ. ಸಿಇಓ ಜಿ.ಆರ್.ಜೆ. ದಿವ್ಯಾಪ್ರಭು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿರುವ ವಸತಿ ನಿಲಯಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯನ್ವಯ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದರ ಕುರಿತಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ವಸತಿ ನಿಲಯಗಳನ್ನು ಕೋವಿಡ್ ಕೇರ್ ಸೆಂಟರ್‌ಗಳನ್ನಾಗಿ ಮಾಡಿದ್ದರೆ, ಅಲ್ಲಿದ್ದ ವಿದ್ಯಾರ್ಥಿಗಳನ್ನು ತಕ್ಷಣ ಬೇರೆಡೆಗೆ ಸ್ಥಳಾಂತರಿಸಬೇಕು. ವಿದ್ಯಾರ್ಥಿಗಳಿಗೆ ಅನುಸಾರವಾಗಿ ಹಾಸಿಗೆಗಳು, ಅಗತ್ಯ ಸೌಲಭ್ಯವನ್ನು ಒದಗಿಸಬೇಕು. ಸರ್ಕಾರದ ನಿಯಮಾನುಸಾರ 1 ರಿಂದ 10ರ ನಮೂನೆಯಲ್ಲಿ ಹಾಸ್ಟೆಲ್‌ಗೆ ಸರಬರಾಜಾಗುವ ವಸ್ತುಗಳು, ಪರಿಕರಗಳ ಬಗ್ಗೆ ಪ್ರಕಟಣಾ ಲಕದಲ್ಲಿ ನಮೂದಿಸುವುದರ ಜೊತೆಗೆ ಇಲಾಖಾ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಸೂಚಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!