ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿ: ಮೋದಿಗೆ ಕಾಂಗ್ರೆಸ್ ಒತ್ತಾಯ

 ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣಾ ಫಲಿತಾಂಶಕ್ಕೆಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಬಿಜೆಪಿ ಬಣದ ನಿರೀಕ್ಷೆಗಿಂತ ಉತ್ತಮ ಪ್ರದರ್ಶನವು ನರೇಂದ್ರ ಮೋದಿ ಮಾಜಿ ಪ್ರಧಾನಿಯಾಗುವ ಸಮಯ ಬಂದಿದೆ ಎಂಬುದರ ಸಂಕೇತವಾಗಿದೆ ಎಂದು ಬರೆದಿದ್ದಾರೆ.

ಬಿಜೆಪಿಯ ಸಂಭಾವ್ಯ ಸ್ಥಾನಗಳ ನಷ್ಟದ ನೈತಿಕ ಜವಾಬ್ದಾರಿಯನ್ನು ಪ್ರಧಾನಿ ಮೋದಿ ವಹಿಸಿಕೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಳಿದರು.

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ. ಇದು ಈ ಚುನಾವಣೆಯ ಸಂದೇಶ ಎಂದು ಜೈರಾಮ್ ರಮೇಶ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!