ಸಿಎಂ ಸ್ಥಾನ ಸಿಗದಿದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ?: ಈ ಕುರಿತು ಡಿಕೆ ಶಿವಕುಮಾರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಚುನಾವಣೆ ಫಲಿತಾಂಶ ಬಂದು ದಿನ ಕಳೆದರೂ ಐನ್ನೂ ಸಿಎಂ ಆಯ್ಕೆ ಕಸರತ್ತು ನಡೆಯುತ್ತಿದ್ದು, ಯಾರನ್ನು ಮುಂದಿನ ಮುಖ್ಯಮಂತ್ರಿ ಮಾಡ್ಬೇಕೆಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಈ ನಡುವೆ ದೆಹಲಿ ತಲುಪಿರುವ ಡಿಕೆ ಶಿವಕಕುಮಾರ್ ಇದೀಗ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ್ದಾರೆ. ಇದೇ ವೇಳೆ ಹಲವು ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ತಾನು ಸಿಎಂ ಸ್ಥಾನ ಸಿಗದಿದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಅನ್ನೋದು ಸುಳ್ಳು. ಈ ರೀತಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಸಿಗದಿದ್ದರೆ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅನ್ನೋ ಮಾಧ್ಯಮ ವರದಿಯಲ್ಲಿ ಸತ್ಯಾಂಶವಿಲ್ಲ. ಈ ರೀತಿಯ ಸುಳ್ಳು ಹೇಳಿಕೆ ನೀಡಿದ ಮಾಧ್ಯಮದ ವಿರುದ್ಧ ಮಾನನಷ್ಟ ಮೊಕದ್ದಮೆ ಹೊಡುತ್ತೇನೆ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!