Tuesday, June 28, 2022

Latest Posts

ರಾಜೀನಾಮೆ ನೀಡಿದ ದೆಹಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್​

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಅವರಿಗೆ ಸಲ್ಲಿಸಿದ್ದರೆಂದು ವರದಿಯಾಗಿದೆ. ವೈಯಕ್ತಿಕ ಕಾರಣ ನೀಡಿ, ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆಂದು ಸುದ್ದಿಸಂಸ್ಥೆ ವರದಿ ಮಾಡಿದೆ.

2008ರಲ್ಲಿ ನಜೀಬ್ ಜಂಗ್ ರಾಜಿನಾಮೆಯಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿಯಾಗಿದ್ದ ಅನಿಲ್ ಬೈಜಾಲ್ ನೇಮಕಗೊಂಡಿದ್ದರು. ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿದ್ದ, 1969ರ ಐಎಎಸ್ ಅಧಿಕಾರಿ ಬೈಜಾಲ್, ಹಲವು ಸಚಿವಾಲಯಗಳಲ್ಲಿ ಪ್ರಮುಖ ಸ್ಥಾನಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದರು. ನಜೀಬ್​ ಜಂಗ್ ಅನಿರೀಕ್ಷಿತವಾಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ಆ ಸ್ಥಾನಕ್ಕೆ ಆಯ್ಕೆಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss