Saturday, July 2, 2022

Latest Posts

ಸಿಎಂ ಯಡಿಯುರಪ್ಪ ರಾಜಿನಾಮೆ ಸುಳಿವು: ಬಿಜೆಪಿ ರಾಷ್ಟ್ರೀಯ ಪ್ರಧಾ‌ನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದೇನು?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರು ರಾಜಿನಾಮೆ ನೀಡುವ ಬಗ್ಗೆ ಸುಳಿವು ನೀಡುತ್ತಿದ್ದಂತೆಯೇ, ಪಕ್ಷದ ಕರ್ನಾಟಕದ ಉಸ್ತುವಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ.
‘ನಿಮ್ಮೆಲ್ಲರಿಗೂ ನನ್ನ ನಮಸ್ಕರ್. ನಾವು ಒಂದು ದಿನ ಈ ಬಗ್ಗೆ ಒಟ್ಟಿಗೆ ಕುಳಿತು ಚರ್ಚಿಸುತ್ತೇವೆ. ನಾವೂ ಒಟ್ಟಿಗೆ ಕುಳಿತು ಚಹಾ ಸೇವಿಸುತ್ತೇವೆ’ ಎಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್ ಹೇಳಿದರು.
‘ನಮ್ಮ ಪಕ್ಷದ ಕಾರ್ಯಕರ್ತರು, ಮಂತ್ರಿಗಳು ಮತ್ತು ಶಾಸಕರು ಎಲ್ಲರೂ ಒಂದಾಗಿದ್ದಾರೆ ಮತ್ತು ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ’ ಎಂದು ಸಿಂಗ್ ಹೇಳಿದರು. ಅವರನ್ನು ಬದಲಿಸುವ ಬಗ್ಗೆ ಊಹಾಪೋಹ ಇದ್ದರೂ, ಯಡಿಯೂರಪ್ಪ ಅವರು ಗುರುವಾರ ಹೊರಹೋಗುವ ಬಗ್ಗೆ ಮೊದಲ ಬಾರಿಗೆ ಸುಳಿವು ನೀಡಿದರು. ಪಕ್ಷದ ಹೈಕಮಾಂಡ್ ಜುಲೈ 25 ರಂದು ಸೂಚನೆ ನೀಡಲಿದೆ, ಅದನ್ನು ಅವರು ಪಾಲಿಸುತ್ತೇನೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss