ರಾಷ್ಟ್ರಕವಿ ಡಾ.ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ, ಸದಸ್ಯರ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರಕವಿ ಡಾ.ಜಿಎಸ್ ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಎಸ್.ಜಿ ಸಿದ್ಧರಾಮಯ್ಯ ಹಾಗೂ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆ ಪತ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಾಳಿಕೆಗಳನ್ನು ಕಂಡು ಆತಂಕ, ಭಯ ಉಂಟಾಗಿದೆ ಎಂದಿದ್ದಾರೆ.
ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಎಸ್ ಜಿ ಸಿದ್ಧರಾಮಯ್ಯ ಅವರೊಂದಿಗೆ ಸದಸ್ಯರಾದಂತ ಡಾ.ಎಚ್ ಎಸ್ ರಾಘವೇಂದ್ರ ರಾವ್, ಡಾ.ಚಂದ್ರಶೇಖರ ನಂಗಲಿ ಮತ್ತು ಡಾ.ನಟರಾಜ ಬೂದಾಳು ಕೂಡ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!