ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಅಫ್ಘಾನಿಸ್ತಾನವನ್ನು ತಮ್ಮ ತೆಕ್ಕೆಗೆ ಪಡೆದುಕೊಂಡಿರುವ ತಾಲಿಬಾನಿಗರು ಮಹಿಳೆಯರ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಬೂಲ್ನ ರಾಷ್ಟ್ರಪತಿ ಭವನದ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಹೊಸದಾಗಿ ಆಯ್ಕೆಯಾಗುವ ತಾಲಿಬಾನ್ ಸರ್ಕಾರವು ಮಹಿಳಾ ಹಕ್ಕುಗಳನ್ನು ಗೌರವಿಸಬೇಕು ಎನ್ನುವ ಗಟ್ಟಿಧ್ವನಿ ಮೊಳಗಿಸಿದರು. ಹೊಸ ಸರ್ಕಾರದಲ್ಲಿ ಮಹಿಳೆಯರನ್ನು ಪಾಲುದಾರರನ್ನಾಗಿ ಮಾಡಲು ಈ ವೇಳೆ ಆಗ್ರಹಿಸಲಾಯಿತು.
ಕೆಲವು ಮಹಿಳೆಯರು ಶುಕ್ರವಾರ ಅರಮನೆಯ ಮೊದಲ ಗೇಟ್ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ‘ಮಹಿಳೆಯರಿರುವ ವೀರರ ಕ್ಯಾಬಿನೆಟ್’ (A heroic cabinet with the presence of women) ಎಂದು ಬರೆದಿರುವ ಭಿತ್ತಿ ಪತ್ರಗಳು ಈ ಸಂದರ್ಭದಲ್ಲಿ ಪ್ರದರ್ಶನಗೊಂಡವು.
ಮಾನವ ಹಕ್ಕುಗಳ ರಕ್ಷಣೆ ಮತ್ತು ಹಿಂದಿನ ಕ್ರೂರ ಆಡಳಿತ ಬೇಡ ಎಂದು ಘೋಷಣೆ ಕೂಗಲಾಯಿತು. ಈ ಮೂಲಕ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಶಿಕ್ಷಣ ಮತ್ತು ಸಮಾನತೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವೂ ಕೂಡಾ ಈ ಪ್ರತಿಭಟನೆಯಲ್ಲಿ ವ್ಯಕ್ತವಾಗುತ್ತಿದೆ.