ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ಪ್ರಧಾನಿ ನರೇಂದ್ರ ಮೋದಿ ಅವರು ತೆರಳಿದ್ದು, ಇದರ ಬೆನ್ನಲ್ಲೇ ಶ್ರೀಲಂಕಾ 11 ಭಾರತೀಯ ಮೀನುಗಾರರನ್ನು ಭಾನುವಾರ ಬಿಡುಗಡೆ ಮಾಡಿದೆ.
ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಜತೆಗಿನ ಮಾತುಕತೆಯ ಸಂದರ್ಭದಲ್ಲಿ ಮೀನುಗಾರರ ಸಮಸ್ಯೆ ಬಗ್ಗೆ ಮೋದಿ ಪ್ರಸ್ತಾಪಿಸಿದರು. ಈ ವೇಳೆ ಮೀನುಗಾರರೊಂದಿಗೆ ಮಾನವೀಯವಾಗಿ ವರ್ತಿಸುವಂತೆ ಮೋದಿ ಅವರು ಅನುರ ಕುಮಾರ ದಿಸ್ಸಾನಾಯಕೆ ಅವರಲ್ಲಿ ಮನವಿ ಮಾಡಿದ್ದರು.
ಮನವಿ ಮಾಡಿದ ಬೆನ್ನಲ್ಲೇ ಈ ಸಮಸ್ಯೆಯನ್ನು ಬಗೆ ಹರಿಸಲು ಶ್ರೀಲಂಕಾ ಮುಂದಾಗಿದೆ. ಭಾನುವಾರ 11 ಭಾರತೀಯ ಮೀನುಗಾರರನ್ನು ವಿಶೇಷ ಸೂಚನೆಯಡಿ ಬಿಡುಗಡೆ ಮಾಡಿದೆ.
ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಅವರೊಂದಿಗಿನ ಮಾತುಕತೆ ಬಳಿಕ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ನಾವು ಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಈ ವಿಷಯದಲ್ಲಿ ಮಾನವೀಯತೆಯಿಂದ ಮುಂದುವರಿಯಬೇಕು ಎಂದು ಹೇಳಿದ್ದನ್ನು ಅವರು ಒಪ್ಪಿಕೊಂಡಿದ್ದಾರೆ. ಮೀನುಗಾರರು ಮತ್ತು ಅವರ ದೋಣಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆಯೂ ಅವರಲ್ಲಿ ಮನವಿ ಮಾಡಿರುವುದಾಗಿ ಹೇಳಿದ್ದರು.