ಆಫ್ರಿಕಾ ವಿರುದ್ಧದ ಮೂರನೇ ಟಿ 20ಯಿಂದ ಕೊಹ್ಲಿಗೆ ವಿಶ್ರಾಂತಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.
ಹೌದು, ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಕ್ಟೋಬರ್ 4ರಂದುಅಂತಿಮ ಪಂದ್ಯ ನಡೆಯಲಿದ್ದು, ಕೊಹ್ಲಿಗೆ ರೆಸ್ಟ್​ ಕೊಡುವ ಸಾಧ್ಯತೆ ಹೆಚ್ಚಿದೆ.
ಮಾಜಿ ನಾಯಕ ವಿರಾಟ್ ಕೊಹ್ಲಿ ಸೋಮವಾರ ಬೆಳಿಗ್ಗೆ ಮುಂಬೈಗೆ ಪ್ರಯಾಣ ಬೆಳೆಸಿದರು. ಉಳಿದ ಆಟಗಾರರೊಂದಿಗೆ ಇಂಧೋರ್ ಗೆ ಪ್ರಯಾಣಿಸಲಿಲ್ಲ.
ಇನ್ನು ಟಿ 20 ವಿಶ್ವಕಪ್‌ ಗಾಗಿ ಪೂರ್ವಸಿದ್ಧತಾ ಶಿಬಿರಕ್ಕಾಗಿ ಭಾರತ ತಂಡ ಅಕ್ಟೋಬರ್ 6 ರಂದು ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲಿದೆ. ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಮುಂಬೈನಲ್ಲಿ ತಂಡವನ್ನು ಸೇರುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!