July 22, 2026
Wednesday, July 22, 2026
spot_img

ಏಕಾಏಕಿ ಹೊತ್ತಿ ಉರಿದ ರೆಸ್ಟ್ರೋ ಬಾರ್: ಶಾರ್ಟ್ ಸರ್ಕ್ಯೂಟ್ ಶಂಕೆ

ಹೊಸದಿಗಂತ ವರದಿ ಕಲಬುರಗಿ:

ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ (ಎಸ್‌ವಿಪಿ) ವೃತ್ತದಲ್ಲಿರುವ ವಿಂಟೆಜ್ ದಿ ರೆಸ್ಟ್ರೋ ಬಾರ್ & ರೆಸ್ಟೋರೆಂಟ್ ಕಟ್ಟಡದಲ್ಲಿ ಗುರುವಾರ ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಬಾರ್‌ನ ಮೇಲಂತಸ್ತಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಜ್ವಾಲೆಗಳು ವ್ಯಾಪಿಸಿ ಕಟ್ಟಡದ ಮೇಲ್ಭಾಗ ಧಗಧಗನೆ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಎರಡು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡವು.

ಇದನ್ನೂ ಓದಿ:

ಅಗ್ನಿಶಾಮಕ ಸಿಬ್ಬಂದಿ ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿದ ಪರಿಣಾಮ ಬೆಂಕಿ ಅಕ್ಕಪಕ್ಕದ ಕಟ್ಟಡಗಳಿಗೆ ವ್ಯಾಪಿಸದಂತೆ ತಡೆಗಟ್ಟಲಾಯಿತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ಪ್ರಾಥಮಿಕ ಮಾಹಿತಿಯಂತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿ ಅವಘಡದ ನಿಖರ ಕಾರಣವನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಈ ಘಟನೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !