Friday, March 5, 2021

Latest Posts

ಕೊರೋನಾ ಭೀತಿ: ಮೇ 17ರವರೆಗೂ ಅನಗತ್ಯ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅನಗತ್ಯ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿ ಸುವುದಾಗಿ ಇಂಗ್ಲೆಂಡ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.

ಫೆ.22 ರಿಂದ ಮೇ.17ರವರೆಗೂ ಅನಗತ್ಯವಾಗಿರುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸುವುದಾಗಿ ಇಂಗ್ಲೆಂಡ್ ಸರ್ಕಾರ ಆದೇಶ ಹೊರಡಿಸಿದೆ. ವಿಮಾನ ಸಂಚಾರದಿಂದ ಕೊರೋನಾ ಸೋಂಕು ಹರಡುವ ಅಪಾಯ ಹೆಚ್ಚಿದ್ದು, ರೂಪಾಂತರಿ ಕೊರೋನಾ ಭೀತಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಈಗಾಗಲೇ ಇಂಗ್ಲೆಂಡ್’ನಲ್ಲಿ ಕೊರೋನಾಕ್ಕೆ ಕಡಿವಾಣ ಹಾಕಲು  ಲಾಕ್ ಡೌನ್ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಮಾರ್ಚ್ ತಿಂಗಳು ಪೂರ್ತಿ ಲಾಕ್ ಡೌನ್ ವಿಸ್ತರಿಸಲಾಗುತ್ತದೆ ಎಂದು ಬೋರಿಸ್ ಮತ್ತು ಕೋವಿಡ್ ತಾಂತ್ರಿಕ ಸಲಹೆಗಾರರು ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss