Saturday, October 18, 2025

ಸರ್ಕಾರಿ ಸ್ಥಳಗಳಲ್ಲಿ ನಿರ್ಬಂಧ ಕೇವಲ RSS ಮಾತ್ರವಲ್ಲ, ಎಲ್ಲಾ ಖಾಸಗಿ ಸಂಘ ಸಂಸ್ಥೆಗಳಿಗೂ ಅನ್ವಯ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸುವ ಕುರಿತು ನಿರ್ಬಂಧ ವಿಧಿಸಿರುವುದು ಕೇವಲ ಆರ್‌ಎಸ್‌ಎಸ್‌ಗೆ (RSS) ಮಾತ್ರವಲ್ಲ. ಎಲ್ಲಾ ಖಾಸಗಿ ಸಂಘ ಸಂಸ್ಥೆಗಳಿಗೂ ಅನ್ವಯ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಂಪುಟ ನಿರ್ಧಾರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಜತೆಗೆ, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲೂ ಅವರು ಪೋಸ್ಟ್‌ ಮಾಡಿದ್ದಾರೆ. ʼಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆʼ ಎಂದು ಬರೆದಿದ್ದಾರೆ.

error: Content is protected !!