ಪ್ರವಾಹ ಭೀತಿಯಿಂದ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೆಆರ್‌ಎಸ್ ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಹಿನ್ನೆಲೆ, ನದಿ ಪಾತ್ರದ ಬಳಿ ತೆರಳದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಶಾಂಬ ದೇಗುಲ ಹಾಗೂ ಘೋಸಾಯ್ ಘಾಟ್‍ಗೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಪಿಂಡ ಪ್ರದಾನ ಪೂಜೆಗೂ ನಿರ್ಬಂಧ ವಿಧಿಸಲಾಗಿದೆ.

ನದಿ ಪಾತ್ರದ ಪ್ರಮುಖ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!