ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಫಲಿತಾಂಶ ಅಂದರೆ ಅದು ಏನೂ ಓದದೆ ಇರುವವರ ಫಲಿತಾಂಶ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು 10ನೇ ತರಗತಿ ಕಲಿತ ವಿದ್ಯಾರ್ಥಿಗಳ ಫಲಿತಾಂಶ ಇತ್ತೀಚೆಗೆ ಬಂದಿದೆ.12ನೇ ತರಗತಿಯಲ್ಲಿ ಓದಿದ ವಿದ್ಯಾರ್ಥಿಗಳ ಫಲಿತಾಂಶ ನಾಳೆ ಬರುವ ನಿರೀಕ್ಷೆ ಇದೆ. ಏನೂ ಓದದೆ ಇರುವವರ ಫಲಿತಾಂಶ ಜೂನ್ 4ರಂದು ಹೊರಬೀಳಲಿದೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ದೇಶದಾದ್ಯಂತ ಲೋಕಸಭೆ ಚುನಾವಣೆ ಹಾಗೂ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಜೂನ್ 4ರಂದು ಜನಪತ್ರಿನಿಧಿಗಳ ಭವಿಷ್ಯ ಹೊರಬೀಳಲಿದೆ.