ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 1 ಗಂಟೆಗೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತಿಳಿಸಿದೆ.
ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು ಮಾಹಿತಿ ನೀಡಿದ್ದು, 2025ರ ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ಜೂನ್ 09 ರಿಂದ 20 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ-3 ಹಾಗೂ ಕ್ರೋಢೀಕೃತ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ 01/07/2025ರ ನಾಳೆ ಮಧ್ಯಾಹ್ನ 1:00 ಗಂಟೆಗೆ ಪ್ರಕಟವಾಗಲಿದೆ.
ಜಾಲತಾಣಕ್ಕೆ ಭೇಟಿ ನೀಡಿ ದ್ವಿತೀಯ ಪಿಯುಸಿ ಪರೀಕ್ಷೆ-3ಗೆ ಹಾಜರಾದಂತ ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.