ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಟಾಟಾ ಏಸ್ ವಾಹನ, ಕ್ಯಾಂಟರ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಟಾಟಾ ಏಸ್‌ನಲ್ಲಿದ್ದ ಭೀಮಾಬಾಯಿ, ನಿವೃತ್ತ ಬಿಎಂಟಿಸಿ ಬಸ್ ಚಾಲಕ ಮಹಾಂತಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಹಾಂತಪ್ಪ ನಿವೃತ್ತಿ ಪಡೆದು ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ನಿವೃತ್ತಿ ನಂತರ ಆರಾಮದ ಜೀವನ ನಡೆಸಲು ತಯಾರಿ ನಡೆಸಿದ್ದ ಮಹಾಂತಪ್ಪ ರಸ್ತೆಯಲ್ಲೇ ಕೊನೆಯುಸಿರೆಳೆದಿದ್ದಾರೆ.