ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ವಿಶ್ವವಿದ್ಯಾಲಯಕ್ಕೆ ಆರ್ಥಿಕ ನಷ್ಟ ಉಂಟುಮಾಡಿದ ಆರೋಪದಲ್ಲಿ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ವಿರುದ್ಧ ಹೊಸಪೇಟೆಯ ಕಮಲಾಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮಲ್ಲಿಕಾ ಘಂಟಿ ಅವರ ವಿರುದ್ಧ ದೂರು ದಾಖಲಾಗಿದ್ದು, ಕನ್ನಡ ವಿವಿಗೆ ಆರ್ಥಿಕ ನಷ್ಟ ಉಂಟುಮಾಡಿದ್ದಾರೆ ಎಂದು ಕನ್ನಡ ವಿವಿ ಕುಲಸಚಿವ ಡಾ. ಸುಬ್ಬಣ್ಣ ರೈ ದೂರು ನೀಡಿದ್ದಾರೆ.
ಕನ್ನಡ ವಿವಿಯಲ್ಲಿ ಘಂಟಿ ಅವರು ಕುಲಸಚಿವರಾಗಿದ್ದಾಗ 2015-16, 2016-17ರ ವೇಳೆಯಲ್ಲಿ 1.69ಕೋಟಿ ಮೊತ್ತದ ಕಾಮಗಾರಿಯನ್ನು ಕೆಆರ್‌ಐಡಿಎಲ್ ಸಂಸ್ಥೆಯಿಂದ ನಿರ್ವಹಿಸಲು ಆದೇಶಿಸಿದ್ದು, ಇದರಿಂದಾಗಿ ಶೇ.8 ರಷ್ಟು ಸೇವಾ ಶುಲ್ಕ ಮೊತ್ತದ 13.56 ಲಕ್ಷ ಆರ್ಥಿಕ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಉದ್ದೇಶಪೂರ್ವಕವಾಗಿಯೇ ಕೆಟಿಪಿಪಿ ಕಾಯಿದೆ ಉಲ್ಲಂಘಿಸಲಾಗಿದೆ ಎಂದು ದೂರಲಾಗಿದೆ.