ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ನಿವೃತ್ತ ಡಿಜಿಪಿ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯಾದ ಪತ್ನಿಯನ್ನು ಇಂದು ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.
ನಿವೃತ್ತ ಡಿಜಿ-ಐಜಿಪಿ ಓಂಪ್ರಕಾಶ್‌ರನ್ನು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿಯೇ ಹೆಂಡತಿ ಹಾಗೂ ಮಗಳು ಸೇರಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಅವರನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪತ್ನಿ ಪಲ್ಲವಿ ಹಾಗೂ ಮಗಳು ಸ್ಫೋಟಕ ಮಾಹಿತಿ ಬಹಿರಂಗಪಡಸಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಸಂಜೆ ವೇಳೆಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ದತೆ ನಡೆಸಿದ್ದಾರೆ.
ಕಳೆದ ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು, ಪದೇ ಪದೇ ಗನ್ ತಂದು ನನಗೆ ಮತ್ತು ನನ್ನ ಮಗಳಿಗೆ ಶೂಟ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ರು. ಬೆಳಗ್ಗೆಯಿಂದ ಬೇರೆ ಬೇರೆ ವಿಚಾರಕ್ಕೆ ಮನೆಯಲ್ಲಿ ಜಗಳ ಶುರುವಾಗಿತ್ತು, ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋದಾಗ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನ ನಡೆಸಿದ್ರು, ಈ ವೇಳೆ ನಮ್ಮನ್ನು ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದ್ವಿ ಎಂದು ಪಲ್ಲವಿ ಹೇಳಿಕೆ ನೀಡಿದ್ದಾರೆ.