March 4, 2026
Wednesday, March 4, 2026
spot_img

ಗನ್ ಹಿಡಿದ ಕೈಗಳಿಂದಲೇ ದುರಂತ ನಿರ್ಧಾರ: ನಿವೃತ್ತ DySP ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ತಮ್ಮ ಸ್ವಂತ ಬ್ಯಾರಲ್ ಗನ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಹನುಮಂತಪ್ಪ ಹೆಚ್.ವೈ. ತುರಾಯ್ (70) ಆತ್ಮಹತ್ಯೆ ಮಾಡಿಕೊಂಡವರು. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ 2014ರಲ್ಲಿ ನಿವೃತ್ತರಾದ ಬಳಿಕ ಅವರು ದಾವಣಗೆರೆಯಲ್ಲಿ ನೆಲೆಸಿದ್ದರು.

ಆಪ್ತ ಮೂಲಗಳ ಪ್ರಕಾರ, ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದ ತುರಾಯ್ ಅವರು ಇತ್ತೀಚೆಗೆ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದಾಗ ಅವರು ತಮ್ಮ ಪರವಾನಗಿ ಪಡೆದ ಬ್ಯಾರಲ್ ಗನ್ ಬಳಸಿ ತಮ್ಮ ಜೀವನವನ್ನು ಕೊನೆಗೊಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಕೆಟಿಜೆ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸುಕೋ ತಂಡವು ಮನೆ ಮತ್ತು ಮೃತದೇಹದ ವಿವರವಾದ ಪರಿಶೀಲನೆಯನ್ನು ಕೈಗೊಂಡಿದೆ. ನಿವೃತ್ತ ಅಧಿಕಾರಿಯ ದುರಂತ ಅಂತ್ಯದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !