ಕೇರಳದ ಓಚಿರಾ ದೇಗುಲದ ಚುನಾವಣೆ ಮೇಲ್ವಿಚಾರಣೆಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇಮಕ

 ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇರಳದ ಓಚಿರಾ ಪರಬ್ರಹ್ಮ ದೇವಸ್ಥಾನ ಹಾಗೂ ಅದಕ್ಕೆ ಸಂಬಂಧಿಸಿದ ಸಂಸ್ಥೆಗಳ ನಿರ್ವಹಣೆ, ಹೊಸ ಚುನಾವಣೆಯ ಮೇಲ್ವಿಚಾರಣೆಗೆ ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕೆ. ರಾಮಕೃಷ್ಣನ್‌ ಅವರನ್ನು ಆಡಳಿತಾಧಿಕಾರಿಯಲ್ಲಿ ಸುಪ್ರೀಂ ಕೋರ್ಟ್‌ ನೇಮಕ ಮಾಡಿದೆ.

ನ್ಯಾಯಾಂಗ ಮೇಲ್ವಿಚಾರಣೆಯಲ್ಲಿ ಪಾರದರ್ಶನಕತೆ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಕೋರ್ಟ್‌ ಈ ನಿರ್ಧಾರ ಕೈಗೊಂಡಿದೆ.

ನ್ಯಾಯಮೂರ್ತಿ ಸಂಜೀವ್‌ ಖನ್ನಾ, ನ್ಯಾಯಮೂರ್ತಿ ಸಂಜಯ್‌ ಕುಮಾರ್‌ ಹಾಗೂ ನ್ಯಾಯಮೂರ್ತಿ ಆರ್‌. ಮಹದೇವನ್‌ ಅವರನ್ನು ಒಳಗೊಂಡ ಪೀಠ ದೇವಾಲಯಗಳನ್ನು ಅತ್ಯಂತ ಕಾಳಜಿಯಿಂದ ಸಂರಕ್ಷಿಸುವ ಅಗತ್ಯ ಇದೆ ಎಂದು ಹೇಳಿದೆ.

ದೇವಾಲಯಗಳು ಹಾಗೂ ಅದರ ಆಸ್ತಿಗಳನ್ನು ಎಚ್ಚರಿಕೆಯಿಂದ ಪುನಃಸ್ಥಾಪನೆ ಮಾಡುವುದು, ರಕ್ಷಣೆ ಮಾಡುವುದು ಅಗತ್ಯ. ಸ್ವತಂತ್ರ ಆಡಳಿತಾಧಿಕಾರಿ ಅಡಿಯಲ್ಲಿ ಚುನಾವಣೆಗಳನ್ನು ನಡೆಸುವುದು ಅಗತ್ಯವಿದೆ ಎಂದು ಪೀಠ ಹೇಳಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!