ಹೊಸದಿಗಂತ ವರದಿ, ಬೆಂಗಳೂರು :
ಜೆಡಿಎಸ್ ಪಕ್ಷ ಸೇರಿದ ವಿಶ್ರಾಂತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ರಾಜ್ಯಾಧ್ಯಕ್ಷರಾದ ಎಚ್.ಡಿ ಕುಮಾರಸ್ವಾಮಿ ಅವರು ಪಕ್ಷಕ್ಕೆ ಬರಮಾಡಿಕೊಂಡರು.
ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಪಕ್ಷದ ಮಾಜಿ ಅಧ್ಯಕ್ಷ HK ಕುಮಾರಸ್ವಾಮಿ, ಶಾಸಕ ನೇಮಿರಾಜ್ ನಾಯಕ್, ಮಾಜಿ ಸಚಿವ ಅನಿಲ್ ಲಾಡ್ ಮುಂತಾದವರು ಮಿರ್ಜಿ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.