Friday, March 24, 2023

Latest Posts

ಆಂಧ್ರ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ನಿವೃತ್ತ ನ್ಯಾ. ಅಬ್ದುಲ್ ನಜೀರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ (Abdul Nazir) ಅವರು ಶುಕ್ರವಾರ (Andhra Governor) ಪ್ರಮಾಣ ವಚನ ಸ್ವೀಕರಿಸಿದರು.

ಆಂಧ್ರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹೈದರಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ, ಅವರ ಪತ್ನಿ ವೈಎಸ್ ಭಾರತಿ ರೆಡ್ಡಿ, ಮುಖ್ಯ ಕಾರ್ಯದರ್ಶಿ ಡಾ ಕೆಎಸ್ ಜವಾಹರ್ ರೆಡ್ಡಿ, ಹಲವು ಹಾಲಿ ಸಚಿವರು, ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ಹಿರಿಯ ಅಧಿಕಾರಿಗಳು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!