ಹೊಸದಿಗಂತ ವರದಿ,ಮಡಿಕೇರಿ:
ಡೆತ್ ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದ್ದು, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಎರಡು ತಿಂಗಳ ಹಿಂದೆಯಷ್ಟೇ ಸೇನೆಯಿಂದ ನಿವೃತ್ತಿ ಹೊಂದಿದ್ದ ನಗರದ ಉಕ್ಕುಡ ನಿವಾಸಿ ಸಂದೇಶ್ (35) ನಾಪತ್ತೆಯಾಗಿರುವ ನಿವೃತ್ತ ಯೋಧ.
ನಗರಕ್ಕೆ ನೀರು ಸರಬರಾಜು ಮಾಡುವ ಪಂಪಿನ ಕೆರೆಯ ದಡದಲ್ಲಿ ಸಂದೇಶ್ ಅವರ ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಆದರೆ ಕೆರೆಯಲ್ಲಿ ಹೂಳು ತುಂಬಿರುವುದರಿಂದ ಇದುವರೆಗೆ ಯಾವುದೇ ಸುಳಿವು ದೊರಕಿಲ್ಲ ಎನ್ನಲಾಗಿದ್ದು, ಪತ್ನಿ ಹಾಗೂ ಮಕ್ಕಳ ರೋದನ ಮುಗಿಲು ಮುಟ್ಟಿದೆ.