ನಿವೃತ್ತಿ ಘೋಷಣೆ ವಾಪಾಸ್: ಮರಳಿ ಬ್ಯಾಟ್ ಹಿಡಿಯಲು ನಿರ್ಧರಿಸಿದ ಮನೋಜ್ ತಿವಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಾರದ ಹಿಂದೆ ಕ್ರಿಕೆಟ್‍ಗೆ (Cricket) ವಿದಾಯ ಘೋಷಿಸಿದ್ದ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಮನೋಜ್ ತಿವಾರಿಯವರು (Manoj Tiwary) ಮತ್ತೆ ಕ್ರಿಕೆಟ್‍ಗೆ ಮರಳುತ್ತಿದ್ದಾರೆ.

ಬಂಗಾಳ ಕ್ರಿಕೆಟ್ ಅಧ್ಯಕ್ಷ ಸ್ನೇಹಶಿಶ್ ಗಂಗೂಲಿ ಅವರೊಂದಿಗೆ ಚರ್ಚಿಸಿದ ನಂತರ ಮನೋಜ್ ತಮ್ಮ ನಿರ್ಧಾರವನ್ನು ಬದಲಾಯಿಸಿದ್ದು, ಬಂಗಾಳ (Bengal) ಕ್ರಿಕೆಟ್‍ಗಾಗಿ ಆಡಲು ಬಯಸಿದ್ದಾರೆ .
ತಿವಾರಿ ಅವರು ಕಳೆದ ಗುರುವಾರ ನಿವೃತ್ತಿ ಘೋಷಿಸಿದ್ದರು. ಆದರೆ ಈಗ ಸಿಎಬಿ ಮೂಲಗಳ ಪ್ರಕಾರ ಅವರು ಮತ್ತೆ ಕ್ರಿಕೆಟ್ ಕ್ಷೇತ್ರಕ್ಕೆ ಮರಳಲಿದ್ದಾರೆ.

ಮನೋಜ್ ತಿವಾರಿ ಕ್ರಿಕೆಟ್ ಜೊತೆಗೆ ರಾಜಕೀಯದಲ್ಲೂ ಹೊಸ ಇನಿಂಗ್ಸ್ ಆರಂಭಿಸಿದ್ದರು. ಪ್ರಸ್ತುತ ಪಶ್ಚಿಮ ಬಂಗಾಳದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿದ್ದಾರೆ.

2015ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದ ತಿವಾರಿ 12 ಏಕದಿನ ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದರು. ಇದರಲ್ಲಿ ಒಂದು ಅರ್ಧ ಶತಕ, ಒಂದು ಶತಕ ಸೇರಿದಂತೆ ಒಟ್ಟು 287 ರನ್ ಕಲೆಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!