ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿರುವ ವಿಚಾರವಾಗಿ ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. ಆದರೆ ಆಗ ಸಮರ್ಥನೆ ಮಾಡಿಕೊಂಡರು ಎಂದು ಪ್ರತಿಕ್ರಿಯೆ ನೀಡಿದರು.
ತಪ್ಪು ಮಾಡಿಲ್ಲ ಎಲ್ಲ ನ್ಯಾಯಯುತವಾಗಿ ಇದೆ ಎಂದಾದರೆ ಸೈಟ್ ವಾಪಾಸ್ ಕೊಡದೇ ಕಾನೂನು ಏನಿದ್ಯೋ ಅದನ್ನು ಎದುರಿಸಬೇಕಿತ್ತು. ಈಗ ಅರ್ಧ ದಾರಿಲಿ ವಾಪಾಸ್ ಹೋದ್ರೆ ಅನುಮಾನಗಳು ಇನ್ನಷ್ಟು ಹೆಚ್ಚಾಗತ್ತೆ. ಇರಲಾರದೆ ಮತ್ತೆ ಸಮಸ್ಯೆಯನ್ನು ಸಿದ್ದರಾಮಯ್ಯ ಮೈಮೇಲೆ ಎಳೆದುಕೊಂಡಿದ್ದಾರೆ ಎಂದಿದ್ದಾರೆ.