ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭಾ ಉಪಚುನಾವಣೆ ಮುಗಿದ ಕೂಡಲೇ ಅತೃಪ್ತ ಬಿಜೆಪಿ ಸದಸ್ಯರು ಕಾರ್ಯಪ್ರವೃತ್ತರಾಗಿ ಮತ್ತೊಂದು ಸಭೆ ನಡೆಸಲು ನಿರ್ಧರಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ಅವರ ನಿವಾಸದಲ್ಲಿ ಇಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಧ್ಯಕ್ಷತೆಯಲ್ಲಿ ಮತ್ತೊಂದು ಸಭೆ ನಡೆಯಲಿದೆ. ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಜಿ.ಎಂ.ಸಿದೇಶ್ವರ್, ಅರವಿಂದ ಲಿಂಬಾವಳಿ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ. ರಾಜ್ಯಾಧ್ಯಕ್ಷರನ್ನಾಗಿ ಬೇರೆಯವರನ್ನು ನೇಮಿಸುವ ಕುರಿತು ಚರ್ಚೆ ನಡೆಸಲು ಯತ್ನಾಳ್ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಮಹತ್ವದ ಸಭೆಯ ಬಳಿಕ ಶಾಸಕ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.