ಅಶ್ವಿನಿ ಪುನೀತ್ ರಾಜ್‌ಕುಮಾರ್ ತಂದೆ ರೇವಾನಾಥ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಅವರ ತಂದೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುನೀತ್ ಮಾವ ಭಾಗಮನೆ ರೇವಾನಾಥ್ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಎನ್‌ಎಚ್‌ಎಐನ ಮುಖ್ಯ ಎಂಜಿನಿಯರ್ ಆಗಿ ರೇವಾನಾಥ್ ಅವರು ಕಾರ್ಯನಿರ್ವಹಿಸುತ್ತಿದ್ದರು.
20  ವರ್ಷಗಳ ಹಿಂದೆ ರೇವಾನಾಥ್ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಪುನೀತ್ ನಿಧನದ ನಂತರ ತೀವ್ರ ಆಘಾತಕ್ಕೆ ಒಳಗಾಗಿದ್ದರು ಎಂದು ಕುಟುಂಬದವರು ಹೇಳಿದ್ದಾರೆ. ಕೆಲವೇ ತಿಂಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಅಶ್ವಿನಿಗೆ ಇದೀಗ ಮತ್ತೆ ಆಘಾತವಾಗಿದ್ದು, ತಂದೆಯನ್ನು ಕಳೆದುಕೊಂಡಿದ್ದಾರೆ. ಪುನೀತ್ ಅಭಿಮಾನಿಗಳು, ಸಿನಿ ಗಣ್ಯರು ಅಶ್ವಿನಿ ಅವರ ತಂದೆ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!