ಜಾಮೀನು ಕೋರಿ ಅರ್ಜಿ ಸಲ್ಲಿಸಿದ ರೇವಣ್ಣ: ಎಸ್‌ಐಟಿಗೆ ನೊಟೀಸ್ ನೀಡಿದ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪೊಲೀಸರು ಬಂಧಿಸದಂತೆ ಸಂಸದ ಪ್ರಜ್ವಲ್ ಹಾಗೂ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ನೊಟೀಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.

ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಬಂಧನದ ಭೀತಿ ಎದುರಾದ ಬೆನ್ನಲ್ಲಿಯೇ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಕಲಾಪದ ಸಮಯ ಮುಕ್ತಾಯವಾಗಿದ್ದರಿಂದ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ಆದರೆ, ನ್ಯಾಯಾಲಯವು ಎಸ್‌ಐಟಿಗೆ ನೊಟೀಸ್ ಜಾರಿ ಮಾಡಲಾಗಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಅರ್ಜಿ ವಿಚಾರಣೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!