ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜೈಲಿನಿಂದ ಹೊರಬರುತ್ತಿದ್ದ ವೇಳೆ ಜೈಲಿನ ಹೊರಗೆ ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ.
ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನಿನ ಮೇಲೆ ಷರತ್ತು ಬದ್ಧ ಬಿಡುಗಡೆಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ರೇವಣ್ಣ ಬಿಡುಗಡೆಗೊಂಡಾಗ ಜೆಡಿಎಸ್ ಕಾರ್ಯಕರ್ತರು ಜೈಲಿನ ಬಳಿ ಜಮಾಯಿಸಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದರು.
ಸ್ಥಳದಲ್ಲಿ ಜಮಾಯಿಸಿದ ಕಾರ್ಯಕರ್ತರ ಸಂಖ್ಯೆಯನ್ನು ಪೊಲೀಸರು ನಿಯಂತ್ರಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿ ಜೆಡಿಎಸ್ ಕಾರ್ಯಕರ್ತರನ್ನು ಚದುರಿಸಿದ ಘಟನೆ ನಡೆದಿದೆ.