ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ.ಆರ್. ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.
ರೇವಣ್ಣ ಅವರು ತಂದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (HD Devegowda) ನಿವಾಸಕ್ಕೆ ತೆರಳಿದ್ದು, ಅವರನ್ನು ಕಂಡ ಕೂಡಲೇ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಬ್ಬಿಕೊಂಡು ಸ್ವಾಗತಿಸಿದರು. ಇನ್ನು ಕುಟುಂಬಸ್ಥರನ್ನು ಕಂಡಕೂಡಲೇ ರೇವಣ್ಣ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.