ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಜೆಡಿಎಸ್ ಶಾಸಕ ರೇವಣ್ಣಗೆ ಶರತ್ತು ಬದ್ಧ ಜಾಮೀನು ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ಜೆಡಿಎಸ್ ವರಿಷ್ಠ ಹೆಚ್.ಡಿ. ಕುಮಾರಸ್ವಾಮಿ, ಇದು ಸಂತಸ ಪಡುವ ವಿಚಾರವಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇವಣ್ಣಗೆ ಜಾಮೀನು ದೊರೆತಿದೆ ಎಂಬ ಬಗ್ಗೆ ನನಗೆ ಸಂತಸವಾಗಿದೆ ಎಂದುಕೊಳ್ಳಬೇಡಿ, ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ. ಕಾರ್ಯಕರ್ತರು ಕೂಡಾ ಸಂಭ್ರಮಿಸುವ ಸಮಯ ಇದಲ್ಲ ಎಂದು ಹೇಳಿದ್ದಾರೆ.
ಪೆನ್‌ಡ್ರೈವ್ ಹಂಚಿದವರ ವಿರುದ್ಧ ಈವರೆಗೂ ಕ್ರಮ ತೆಗೆದುಕೊಂಡಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳನ್ನು ಟೀಕಿಸಿದ ಎಚ್‌ಡಿಕೆ, ನಿಮಗೆ ಜನ್ಮಕೊಟ್ಟ ತಂದೆ ತಾಯಿ ಇದ್ದಾರೆ, ಒಡಹುಟ್ಟಿದವರಿದ್ದಾರೆ ಎಂಬುದನ್ನು ನೆನಪು ಮಾಡಿಕೊಳ್ಳಿ ಎಂದಷ್ಟೇ ಹೇಳಲು ಬಯಸುತ್ತೇನೆ ಎಂದಿದ್ದಾರೆ.