ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಲ್ಲಿ ಕಾಂಗ್ರೆಸ್ (Telangana Congress) ಅಧಿಕಾರದ ಗದ್ದುಗೆ ಏರಿದ್ದು, ಮುಖ್ಯಸ್ಥ ಅನುಮುಲಾ ರೇವಂತ್ ರೆಡ್ಡಿ (Anumula Revanth Reddy) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಲ್ಲೆಡೆ ಬಲವಾಗಿ ಕೇಳಿಬರುತ್ತಿದ್ದು, ಇದರ ಬೆನ್ನಲ್ಲೇ ‘ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.
ಚುನಾವಣೆಯಲ್ಲಿ ಪಕ್ಷವನ್ನು ಅಭೂತಪೂರ್ವ ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಅನುಮುಲಾ ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಆಯ್ಕೆಯಾಗಿದ್ದಾರೆ.ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ, . ಉನ್ನತ ಸ್ಥಾನಕ್ಕೆ ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಆಯ್ಕೆ ಕುರಿತ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ರಾಹುಲ್ ಗಾಂಧಿ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೇರಿದಂತೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ನಿರ್ಧಾರ ಪ್ರಕಟಿಸುವ ಮುನ್ನ ಹೈದರಾಬಾದ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಶಾಸಕಾಂಗ ಸಭೆ ಬಳಿಕ ಅಧಿಕೃತವಾಗಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.