Tuesday, February 27, 2024

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರೇವಂತ್ ರೆಡ್ಡಿ ಅವರಿಗೆ ರಾಜ್ಯಪಾಲೆ ತಮಿಳಸೈ ಸೌಂದರ್ಯರಾಜನ್​ ಅವರು ಪ್ರಮಾಣ ವಚನ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿಕಾಂಗ್ರೆಸ್‌ನ ಪ್ರಮುಖ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ ಶಾಸಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇದೇ ವೇಳೆ ಸಂಪುಟದ 11 ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಕೊಂಡ ಸುರೇಖಾ, ಡಿ ಅನಸೂಯಾ ಸೀತಕ್ಕ, ತುಮ್ಮಲ ನಾಗೇಶ್ವರ ರಾವ್ ಮತ್ತು ಜೂಪಲ್ಲಿ ಕೃಷ್ಣ ರಾವ್. ಬಹುತೇಕ ಸಚಿವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಆದಾಗ್ಯೂ, ಅನಸೂಯಾ “ಪವಿತ್ರ ಹೃದಯಂ” (ಪವಿತ್ರ ಹೃದಯ) ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದ ಆರು ಭರವಸೆಗಳನ್ನು ಜಾರಿಗೊಳಿಸುವ ಹೊಸ ಕಾಯ್ದೆಗೆ ಸಂಬಂಧಿಸಿದ ಎರಡು ಕಡತಗಳಿಗೆ ಸಹಿ ಹಾಕಿದರು ಮತ್ತು ಕುಬ್ಜ ಮಹಿಳೆ ರಜನಿ ಅವರಿಗೆ ಉದ್ಯೋಗ ಒದಗಿಸುವ ಮತ್ತೊಂದು ಕಡತಕ್ಕೆ ಸಹಿ ಹಾಕಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!