ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣ (Telangana CM) ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಹೆಸರು ಘೋಷಣೆಯಾಗಿದೆ.
ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟ ಆದಾಗಿನಿಂದ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು. ಆದರೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಮತ್ತು ವೀಕ್ಷಕರು ಸಿಎಂ ಹೆಸರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಪ್ರಕಟಿಸುತ್ತಾರೆ ಎಂದು ಹೇಳಿದ್ದರು. ಇದೀಗ ಖರ್ಗೆ ಅವರು ಹೆಸರು ಘೋಷಣೆ ಮಾಡಿದ್ದಾರೆ.
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ 64 ಸ್ಥಾನಗಳ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಸಾಧಿಸಿತ್ತು.
ಪ್ರಸ್ತುತ ಚುನಾವಣೆಯಲ್ಲಿತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (TPCC) ಅಧ್ಯಕ್ಷ ಅನುಮುಲಾ ರೇವಂತ್ ರೆಡ್ಡಿ 32,532 ಮತಗಳಿಂದ ಗೆದ್ದಿದ್ದು ಕಾಂಗ್ರೆಸ್ ಗೆಲುವಿನ ರೂವಾರಿ ಆಗಿ ಹೊರಹೊಮ್ಮಿದ್ದಾರೆ.
54ರ ಹರೆಯದ ನಾಯಕ ರೇವಂತ್ ರೆಡ್ಡಿ ಅವರು ಜೂನ್ 2021 ರಲ್ಲಿ ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ತೊರೆದು ಕಾಂಗ್ರೆಸ್‌ಗೆ ಸೇರಿ, ಅಲ್ಪಾವಧಿಯಲ್ಲಿ ಕಾಂಗ್ರೆಸ್‌ಗೆ ಪ್ರಭಾವಶಾಲಿ ವಿಜಯವನ್ನು ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ.