ಪ್ರತೀಕಾರಕ್ಕೆ ಪರಮಾಧಿಕಾರ.. ಅಲ್ಲಾಹುನೇ ಭಾರತ-ಪಾಕ್ ನಡುವಿನ ಸಂಘರ್ಷ ನಿಲ್ಲಿಸಬೇಕು!!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಪಾಕ್ ನಡುವಿನ ಸಂಘರ್ಷ ದಿನೇದಿನೇ ಹೆಚ್ಚುತ್ತಿದೆ. ಇದೀಗ ಅಲ್ಲಾಹುನೇ ಈ ಯುದ್ಧ ನಿಲ್ಲಿಸಬೇಕು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಕಾಲ ಕಳೆದಂತೆ ಭಾರತದೊಂದಿಗೆ ಸಂಘರ್ಷದ ಸಾಧ್ಯತೆಗಳು ಹೆಚ್ಚುತ್ತಿವೆ ಎಂದು ಪಾಕ್ ಸಚಿವ ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಗಮನಹರಿಸಿದಾಗ, ಸಂಘರ್ಷದ ಸಾಧ್ಯತೆ ಹೆಚ್ಚುತ್ತಿದ್ದು, ಕಡಿಮೆಯಾಗುತ್ತಿಲ್ಲ. ಆದರೂ ಅನೇಕ ದೇಶಗಳು ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಿಸುತ್ತಿವೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ಪಾಕಿಸ್ತಾನ ದಾಳಿ ಎದುರಿಸಿದರೆ ಸೂಕ್ತ ಪ್ರತಿಕ್ರಿಯೆ ನೀಡುವುದು ನಿಶ್ಚಿತ. ನಮ್ಮ ಪ್ರತಿಕ್ರಿಯೆಯ ಬಗ್ಗೆ ಯಾವುದೇ ಸಂದೇಹ ಬೇಡ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!