ಕೇಂದ್ರ ಸರಕಾರದಿಂದ ಪರಿಷ್ಕೃತ ಡೇಟಾ ಸಂರಕ್ಷಣಾ ಮಸೂದೆ ಜಾರಿ: ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಡಿಜಿಟಲ್ ಯುಗದಲ್ಲಿ ಹೊಸ ಕ್ರಾಂತಿ ಶುರುವಾಗಿದ್ದು, ದೊಡ್ಡ ತಂತ್ರಜ್ಞಾನ ಕಂಪನಿಗಳು ಮತ್ತು ನಾಗರಿಕ ಸಮಾಜವನ್ನು ಗಾಬರಿಗೊಳಿಸಿದ್ದ ಹಿಂದಿನ ಆವೃತ್ತಿಯನ್ನು ಹಿಂತೆಗೆದುಕೊಂಡ ಮೂರು ತಿಂಗಳ ನಂತರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಶುಕ್ರವಾರ ಪರಿಷ್ಕರಿಸಿದ ಕರಡು ಡೇಟಾ ಸಂರಕ್ಷಣೆ ಮಸೂದೆಯನ್ನು ಬಿಡುಗಡೆ ಮಾಡಿದೆ.

ಕೇಂದ್ರ ಟೆಲಿಕಾಂ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಂದು ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ -2022ರ ಕರಡನ್ನು (Digital Data Protection Bill) ಬಿಡುಗಡೆಗೊಳಿಸಿದ್ದಾರೆ. ಡಿಸೆಂಬರ್ 17ರ ವರೆಗೆ ಸಾರ್ವಜನಿಕರು ಮಸೂದೆಯ ಅಂಶಗಳ ಬಗ್ಗೆ ಪ್ರತಿಕ್ರಿಯೆ ನೀಡಬಹುದಾಗಿದೆ.

ದೂರಸಂಪರ್ಕ ಮಸೂದೆ-2022 ಮತ್ತು 2000ರ ಪರಿಷ್ಕೃತ ಐಟಿ ಕಾಯ್ದೆಯು, ವೈಯಕ್ತಿಕ ಡೇಟಾ ಸಂರಕ್ಷಣೆಗೆ ಕಾನೂನು ಅಡಿಪಾಯ ಹಾಕಿಕೊಡುತ್ತದೆ. ಪ್ರತಿಯೊಬ್ಬರ ವೈಯಕ್ತಿಕ ಡೇಟಾಗಳನ್ನು ಸಂರಕ್ಷಿಸಲು, ವ್ಯಕ್ತಿಯ ಹಕ್ಕು ಹಾಗೂ ಕಾನೂನು ಬದ್ಧ ಉದ್ದೇಶಗಳನ್ನು ಈಡೇರಿಸಲು ಇದು ಶಾಸನ ಬದ್ಧ ಕ್ರಮವಾಗಿದೆ.

ಒಂದು ವೇಳೆ ಡೇಟಾಗಳಿಗೆ ಭದ್ರತಾ ಕ್ರಮಗಳನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾದ್ರೆ ಅಥವಾ ಲೋಪಗಳು ಕಂಡುಬಂದಲ್ಲಿ ಅಂತಹ ಸಂಸ್ಥೆಗಳಿಗೆ 500 ಕೋಟಿ ರೂ. ದಂಡ ವಿಧಿಸುವ ಅಂಶವನ್ನು ಸೇರಿಸಲಾಗಿದೆ.

ಈ ಹಿಂದೆ 2018ರಲ್ಲಿ ಸಂಸತ್ತಿನಲ್ಲಿ ಡೇಟಾ ಸಂರಕ್ಷಣಾ ಮಸೂದೆ ಮಂಡನೆಯಾಗಿತ್ತು. ಇದಕ್ಕೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲಾಗಿತ್ತು. ಇದೀಗ ಹೊಸ ಕರಡನ್ನು ಬಿಡುಗಡೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!