ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹಿಂದಿನಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಹೊಸ ಕಾಯ್ದೆಗಳನ್ನು ಮರು ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಿಗೆ ಭರವಸೆ ನೀಡಿದರು.
ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಬಡಗಲಾಪುರ ನಾಗೇಂದ್ರ ನೇತೃತ್ವದ ರೈತ ಮುಖಂಡರ ನಿಯೋಗದಿಂದ ಸಿಎಂ ಭೇಟಿ ಮಾಡಿತು. ಈ ನಿಯೋಗದಲ್ಲಿ ರೈತ ಮುಖಂಡರಾದ ಚಾಮರಸ ಮಾಲಿ ಪಾಟೀಲ್, ಜಿ.ಸಿ.ಬೈಯ್ಯಾರೆಡ್ಡಿ ಹಲವರಿದ್ದರು.
ಈ ವೇಳೆ ರೈತ ಮುಖಂಡರುಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ ಆಗ್ರಹ ಮಾಡಿದರು. ಆದರೆ, ಈ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಮೊದಲಾದವುಗಳ ಮರುಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು.
ರೈತ ಮುಖಂಡರ ನಿಯೋಗದ ಸಭೆಯಲ್ಲಿ ಜಾನುವಾರು ಹತ್ಯೆ ಕಾಯ್ದೆ ಮರುಪರಿಶೀಲನೆ ನಡೆಸೋದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಹೇಳಿದರು.
ಶೋಷಿತ ಸಮುದಾಯಗಳಿಂದ ಸಿದ್ದರಾಮಯ್ಯ ಭೇಟಿ
ರಾಜ್ಯದಲ್ಲಿ ಶೋಷಿತ ಸಮುದಾಯಗಳ ಒಕ್ಕೂಟದ ಸದಸ್ಯರಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಯಿತು. ಸುಮಾರು 80 ಕ್ಕೂ ಹೆಚ್ಚು ಹಿಂದುಳಿದ ಜಾತಿಗಳ ಪ್ರತಿನಿಧಿಗಳು ಹಾಗೂ 60 ಕ್ಕೂ ಹೆಚ್ಚು ದಲಿತ ಜಾತಿ-ಸಮುದಾಯಗಳ ಮುಖಂಡರಿಂದ ಭೇಟಿ ಮಾಡಲಾಯಿತು. ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ(ಜಾತಿ ಜನಗಣತಿ) ವರದಿ ಆಧರಿಸಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.