ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರಕಾರ ಅಧಿಕಾರಕ್ಕೇರಿದ್ದ ಬೆನ್ನೆಲ್ಲೆ ಇಂದಿರಾ ಕ್ಯಾಂಟೀನ್ (Indira Canteen)ಗೆ ಮರುಜೀವ ಸಿಕ್ಕಿದ್ದು, ಇದೀಗ ವಿಚಾರವಾಗಿ ಹೊಸ ಟೆಂಡರ್ ಕರೆಯುತ್ತೇವೆ. ಕ್ವಾಲಿಟಿ, ಕ್ವಾಂಟಿಟಿಗೂ ಹೆಚ್ಚಿನ ಒತ್ತು ಕೊಡುತ್ತೇವೆ. ಮತ್ತೊಮ್ಮೆ ಟೆಂಡರ್ ಆದ ಬಳಿಕ ರೀ ಲಾಂಚ್ ಮಾಡುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚನೆ ನೀಡಲಾಗಿದೆ. ಈವರೆಗೆ ಪಾಲಿಕೆ ಶೇ.70, ಸರ್ಕಾರ 30% ಅನುದಾನ ನೀಡುತ್ತಿತ್ತು. ಇನ್ಮುಂದೆ ಸರ್ಕಾರ, ಪಾಲಿಕೆ ತಲಾ 50ರಷ್ಟು ಅನುದಾನ ನೀಡುತ್ತೆ. ಎಲ್ಲೆಲ್ಲಿ ಹೊಸ ಕ್ಯಾಂಟೀನ್ ಪ್ರಾರಂಭಿಸಬೇಕೆಂಬ ಬಗ್ಗೆಯೂ ಚರ್ಚೆ ಮಾಡಿ ಪಟ್ಟಿ ಕೊಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಬಿಜೆಪಿ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಸರಿಯಾಗಿ ನಿರ್ವಹಣೆಯಾಗಲಿಲ್ಲ. ಬೆಂಗಳೂರಿನ ಬಹುತೇಕ ಕಡೆ ಇಂದಿರಾ ಕ್ಯಾಂಟೀನ್ ಮುಚ್ಚಿಹೋಗಿದೆ. ಈಗ ಮತ್ತೆ ತಮ್ಮ ಸರ್ಕಾರ ಬಂದ ಹಿನ್ನೆಲೆಯಲ್ಲಿ ತಮ್ಮ ಹಿಂದಿನ ಆಡಳಿತದಲ್ಲಿ ತಂದಿದ್ದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಪುನಾರಾಂಭಿಸಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ.