September 5, 2026
Saturday, September 5, 2026
spot_img

ಹೊಸ ಮನೆಯಲ್ಲಿ ಕ್ಯೂರಿಂಗ್‌ ಮಾಡುವ ವೇಳೆ ವಿದ್ಯುತ್‌ ಶಾಕ್‌ ಹೊಡೆದು ಆರ್‌ಎಫ್‌ಓ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೊಸ ಮನೆಯ ಕ್ಯೂರಿಂಗ್‌ ಮಾಡುವ ವೇಳೆ ವಿದ್ಯುತ್‌ ಶಾಕ್‌ನಿಂದ ಅರಣ್ಯ ಇಲಾಖೆಯ ಆರ್‌ಎಫ್‌ಓ ಮೃತಪಟ್ಟಿರುವ ಘಟನೆ ಹಾಸನದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ.

46 ವರ್ಷದ ಜಗದೀಶ್‌ ಪಿ. ಮೃತಪಟ್ಟ ಅರಣ್ಯಾಧಿಕಾರಿ. ಕುಣಿಗಲ್‌ನಲ್ಲಿ ಕೆಲಸ ಮಾಡುತ್ತಿದ್ದ ಜಗದೀಶ್‌ ಸತ್ಯಮಂಗಲ ಬಡಾವಣೆಯಲ್ಲಿ ಮನೆ ನಿರ್ಮಿಸುತ್ತಿದ್ದರು. ಮನೆಯಲ್ಲಿ ಕ್ಯೂರಿಂಗ್‌ ಮಾಡುವಾಗ ಕರೆಂಟ್‌ ಶಾಕ್‌ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

2015 ರಿಂದ 2020 ರವರೆಗೆ ಹಾಸನ ಜಿಲ್ಲೆಯಲ್ಲಿ ಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿದ್ದರು. ಜಗದೀಶ್.ಪಿ ಸಾವಿಗೆ ಅರಣ್ಯ‌ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !