ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಜಿ ಕರ್ ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕೋರಿ ಸಿಬಿಐ ಬುಧವಾರ ಕಲ್ಕತ್ತಾ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.
ಸೀಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಸೋಮವಾರ ಪ್ರಕರಣದ ಏಕೈಕ ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಬಿಐ ಇಂದು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.
ಸೀಲ್ಡಾ ನ್ಯಾಯಾಲಯದ ತೀರ್ಪಿನ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸೋಮವಾರ ಕೋಲ್ಕತ್ತಾ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರೆ, ಮರಣದಂಡನೆ ಖಚಿತಪಡಿಸಿಕೊಳ್ಳುತ್ತಿದ್ದೇವೆ ಎಂದು ಪ್ರತಿಪಾದಿಸಿದ್ದರು.