Saturday, June 25, 2022

Latest Posts

ರಿಯಾ ಚಕ್ರವರ್ತಿಗೆ ಮತ್ತೆ ಡ್ರಗ್ಸ್‌ ಕರಿನೆರಳು: ಸಲ್ಲಿಕೆಯಾಯ್ತು ಚಾರ್ಜ್‌ ಶೀಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಾಜಪೂತ್‌ ಸಾವಿನ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಹಾಗೂ ಅವರ ಸಹೋದರ ಶೋವಿಕ್‌ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಛಾರ್ಜ್‌ ಶೀಟ್‌ ಸಲ್ಲಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಸರ್ಪಾಂಡೆ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್‌ನಲ್ಲಿ ರಿಯಾ ಹಾಗೂ ಶೋವಿಕ್‌ ಸೆರಿದಂತೆ ಇತರ ಆರೋಪಿಗಳ ಹೆಸರನ್ನು ಉಲ್ಲೇಖಿಸಲಾಗಿದೆ.

ಮಾದಕ ವಸ್ತುಗಳ ಸೇವನೆ ಮತ್ತು ದಿವಂಗತ ಸುಶಾಂತ್‌ ಸಿಂಗ್ ಗೆ ಡ್ರಗ್ಸ್‌ ಖರೀದಿಸಿ ಪಾವತಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ಪ್ರಸ್ತಾಪಿಸಿದೆ. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯ ಅಡಿಯಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ವಿಚಾರಣೆಯನ್ನು ವಿಶೇಷ ನ್ಯಾಯಾಧೀಶ ವಿ ಜಿ ರಘುವಂಶಿ ಅವರು ಜುಲೈ 12 ರಂದು ವಿಚಾರಣೆಗೆ ಮುಂದೂಡಿದ್ದಾರೆ.

ರಿಯಾ ಅಲ್ಲದೆ, ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಇತರ ಹಲವರನ್ನು ಮಾದಕವಸ್ತುಗಳ ಸೇವನೆ, ಸ್ವಾಧೀನ ಮತ್ತು ಹಣಕಾಸು ಆರೋಪದ ಪ್ರಕರಣದಲ್ಲಿ ಆರೋಪಿಗಳಾಗಿ ಬಂಧಿಸಲಾಗಿದೆ. ಅವರಲ್ಲಿ ಹೆಚ್ಚಿನವರು ಜಾಮೀನಿನ ಮೇಲೆ ಹೊರಗಿದ್ದಾರೆ. ಸುಶಾಂತ್ ಸಾವಿನ ನಂತರ, ರಿಯಾ ಆತ್ಮಹತ್ಯೆಗೆ ಪ್ರಚೋದನೆಯ ಆರೋಪವನ್ನು ಹೊಂದಿದ್ದರು ಮತ್ತು ಸಿಬಿಐ, ಇಡಿ ಮತ್ತು ಎನ್‌ಸಿಬಿಯಿಂದ ಹಲವಾರು ಬಾರಿ ವಿಚಾರಣೆಗೆ ಒಳಗಾಗಿದ್ದರು. 2020 ರಲ್ಲಿ ಆಕೆಗೆ ಸುಮಾರು ಒಂದು ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಲಾಯಿತು ಆದರೆ ನಂತರ ಬಾಂಬೆ ಹೈಕೋರ್ಟ್‌ನಿಂದ ಜಾಮೀನು ನೀಡಲಾಯಿತು.

ಪ್ರಸ್ತುತ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss