ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನ್ನಭಾಗ್ಯ ಗ್ಯಾರೆಂಟಿ ಸಿಎಂ ಸಿದ್ದರಾಮಯ್ಯಗೆ ತಲೆನೋವಾಗಿ ಪರಿಣಮಿಸಿದೆ. ಕೇಂದ್ರ ಅಕ್ಕಿ ನೀಡೋದಕ್ಕೆ ನಿರಾಕರಿಸಿದೆ.
ಆದರೆ ಹೇಳಿದ ಮಾತನ್ನು ಉಳಿಸಿಕೊಳ್ಳೋಕೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಬೇರೆ ರಾಜ್ಯಗಳಲ್ಲಿ ಅಕ್ಕಿ ಇದೆಯಾ ಎನ್ನುವ ಪ್ರಶ್ನೆಯಿಟ್ಟಿದ್ದಾರೆ. ಅಕ್ಕಪಕ್ಕದ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡಿಯಾದ್ರೂ ಜನರಿಗೆ ತಿಂಗಳಿಗೆ 10 ಕೆ.ಜಿ ಅಕ್ಕಿ ನೀಡು ನಿರ್ಧಾರವನ್ನು ಸಿದ್ದರಾಮಯ್ಯ ಮಾಡಿದ್ದಾರೆ.
ಅಂತೆಯೇ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರಿಗೆ ಸಿಎಂ ಸಿದ್ದರಾಮಯ್ಯ ಕರೆ ಮಾಡಿದ್ದು, ಅಕ್ಕಿಗಾಗಿ ಬೇಡಿಕೆ ಇಟ್ಟಿದ್ದಾರೆ. ನಮ್ಮಲ್ಲಿ ಅಕ್ಕಿ ದಾಸ್ತಾನು ಇಲ್ಲ ಎಂದು ಚಂದ್ರಶೇಖರ್ ಅವರು ಹೇಳಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ಆಂಧ್ರಪ್ರದೇಶ ಸರ್ಕಾರದ ಜೊತೆ ಮಾತನಾಡಲು ಸೂಚನೆ ನೀಡಿದ್ದೇವೆ. ಇನ್ನು ಛತ್ತೀಸ್‌ಗಢದಲ್ಲಿ ಅಕ್ಕಿ ನೀಡೋದಕ್ಕೆ ಒಪ್ಪಿಗೆ ಕೊಟ್ಟಿದ್ದಾರೆ. ಆದರೆ ಟ್ರಾನ್ಸ್‌ಪೋರ್ಟೇಶನ್ ಹಾಗೂ ಅಕ್ಕಿ ರೇಟ್ ಹೆಚ್ಚೇ ಇದೆ. ಇಂದು ಸಭೆ ನಂತರ ಒಂದು ತೀರ್ಮಾನಕ್ಕೆ ಬರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.