ರಿಕ್ಕಿ ರೈ ಮೇಲೆ ಗುಂಡಿನ ದಾಳಿ; ಅಟ್ಯಾಕ್‌ ಹಿಂದೆ ಮಾಜಿ ಪತ್ನಿ??

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ  ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ತಡರಾತ್ರಿ 12:50ರ ವೇಳೆಗೆ 2 ಸುತ್ತು ಗುಂಡು ಹಾರಿಸಲಾಗಿದೆ.

ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಎಲ್ಲ ಆಯಾಮಗಳನ್ನು ಗಮನಕ್ಕೆ ಇಟ್ಟುಕೊಂಡಿದ್ದಾರೆ. ಅಟ್ಯಾಕ್ ಹಿಂದೆ ರಿಯಲ್ ಎಸ್ಟೇಟ್ ಮಾಫಿಯಾ ಇದೆಯಾ ಎನ್ನುವ ಅನುಮಾನ ಮೂಡಿದೆ. ಲ್ಯಾಂಡ್ ವಿಚಾರಕ್ಕೆ ಈ ಹಿಂದೆ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗ್ತಿದೆ.

ಅಂತೆಯೇ ರಿಕ್ಕಿ ಮೇಲೆ ನಡೆದ ಫೈರಿಂಗ್​ಗೆ ಸಂಬಂಧಿಸಿದಂತೆ ಕಾರು ಚಾಲಕ ಬಸವರಾಜು ಅವರು ಬಿಡದಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಗುಂಡಿನ ದಾಳಿಯಲ್ಲಿ ಮೂವರ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ರಿಕ್ಕಿ ರೈ ನ ಮೊದಲ ಪತ್ನಿ ಅನ್ನಪೂರ್ಣ, ರಾಕೇಶ್ ಮಲ್ಲಿ ಹಾಗೂ ನಿತೇಶ್ ಎಸ್ಟೇಟ್ ಕಂಪನಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!