ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರಿನಲ್ಲಿ 34 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, 12ನೇ ತರಗತಿ, ಡಿ.ಎಡ್, ಬಿ.ಎಡ್ ವಿದ್ಯಾರ್ಹತೆ ಜೊತೆಗೆ ಕನಿಷ್ಟ 27 ರಿಂದ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 27,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಜೂನ್ 1 ರಿಂದ ಜೂನ್ 5ರ ವರೆಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.