CHANDRAYAAN 3| ಜುಲೈ 14 ಸುವರ್ಣಾಕ್ಷರಗಳಲ್ಲಿ ಕೆತ್ತಲ್ಪಟ್ಟ ದಿನ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತದ ಇತಿಹಾಸದಲ್ಲೇ ಮಹತ್ವದ ದಿನ ಇದಾಗಿದ್ದು, ಈ ಶುಭದಿನವನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಲ್ಪಟ್ಟ ದಿನವೆಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಈ ಕುರಿತು ಪ್ರಧಾನಿಯವರ ಟ್ವಿಟರ್‌ ಖಾತೆಯಲ್ಲಿ, ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2023 ಜುಲೈ 14ರ ದಿನವನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಲ್ಪಟ್ಟಿದೆ. ಇಂದು ನಮ್ಮ ಮೂರನೇ ಚಂದ್ರಯಾನದ ಪ್ರಯಾಣ ಪ್ರಾರಂಭವಾಗಲಿದೆ. ಈ ಗಮನಾರ್ಹ ಮಿಷನ್ ನಮ್ಮ ರಾಷ್ಟ್ರದ ಭರವಸೆ ಮತ್ತು ಕನಸುಗಳನ್ನು ಹೊತ್ತೊಯ್ಯುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಬಣ್ಣಿಸಿದ್ದಾರೆ.

ಈ ಮೂಲಕ ಅವರು ಇಸ್ರೋ ಸಂಸ್ಥೆಗೆ ಮತ್ತು ದೇಶದ ಜನತೆಗೆ ಹುರಿದುಂಬಿಸಿದ್ದಾರೆ. ಮತ್ತು ಈ ಪ್ರಯತ್ನ ಯಶಸ್ವಿಯಾಗಲೆಂದು ಶುಭಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!