ಲೋಕಾಯುಕ್ತಕ್ಕೆ ಬಲ: ಇನ್ಮುಂದೆ ದೂರು ದಾಖಲಿಸಲು ಎಡಿಜಿಪಿ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಎಲ್ಲಾ ಪ್ರಕರಣ ವರ್ಗಾವಣೆ ಮಾಡುವಂತೆ ಕೆಲ ದಿನಗಳ ಹಿಂದೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಇನ್ಮುಂದೆ ಭ್ರಷ್ಟಾಚಾರ ಸಂಬಂಧದ ದೂರುಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಿಕೊಳ್ಳುವಂತೆ ಎಡಿಜಿಪಿ ಆದೇಶಿಸಿದ್ದಾರೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಕರ್ನಾಟಕ ಲೋಕಾಯುಕ್ತದ ಎಡಿಜಿಪಿ, ಹೈಕೋರ್ಟ್ ಆದೇಶದಂತೆ ಎಲ್ಲಾ ಲೋಕಾಯುಕ್ತ ಎಸ್ಪಿ, ಡಿಎಸ್ಪಿ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಗಳು, 1988ರ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಂತೆ ಇನ್ಮುಂದೆ ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧದ ದೂರನ್ನು ದಾಖಲಿಸುವಂತೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!