ಮಣಿಪುರದಲ್ಲಿ ಮತ್ತೆ ಗಲಭೆ: ಮಹಿಳೆಯ ಗುಂಡಿಕ್ಕಿ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಣಿಪುರದಲ್ಲಿ ಮತ್ತೆ ಗಲಭೆ ಭುಗಿಲೆದ್ದಿದ್ದು, ಪೂರ್ವ ಇಂಫಾಲ್​​ನಲ್ಲಿ (Imphal) ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಸಾವೊಂಬಂಗ್ ಪ್ರದೇಶದಲ್ಲಿ ದುಷ್ಕರ್ಮಿಗಳು 50 ವರ್ಷ ವಯಸ್ಸಿನ ಮಾರಿಂಗ್ ಎಂಬ ಮಹಿಳೆಯ ಮನೆಗೆ ನುಗ್ಗಿ ಅವರ ಮುಖದ ಮೇಲೆ ಗುಂಡು ಹಾರಿಸಿದ್ದಾರೆ. ಜೊತೆಗೆ ಘಟನಾ ಸ್ಥಳದಿಂದ ಪಲಾಯನ ಮಾಡುವ ಮೊದಲು ಆಕೆಯ ಮುಖವನ್ನು ವಿರೂಪಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತ ಪೊಲೀಸರು ಆರೋಪಿಗಳ ಹುಡುಕಾಟ ನಡೆಸುತ್ತಿದ್ದು, ಗುಂಡಿನ ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಸಮೀಪದ ಪ್ರದೇಶಗಳಲ್ಲಿನ ಮನೆಗಳಲ್ಲೂ ಶೋಧ ನಡೆಸಲಾಗುತ್ತಿದೆ.

ಮೃತ ಮಹಿಳೆ ನಾಗಾ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಈಗಾಗಲೇ ಹಿಂಸಾಚಾರದಿಂದ ಮತ್ತೆ ಮರಳಿ ಸಹಜ ಸ್ಥಿತಿಯತ್ತ ಮಣಿಪುರ ಸಾಗುತ್ತಿದ್ದು, ಶಿಕ್ಷಣ ಸಂಸ್ಥೆಗಳು ಶುಕ್ರವಾರವಷ್ಟೇ ಮರಳಿ ಕಾರ್ಯಾರಂಭ ಮಾಡಿದ್ದವು. ಇದಾದ ನಂತರ ಒಂದು ದಿನದ ಅವಧಿಯಲ್ಲಿ ಪಶ್ಚಿಮ ಇಂಫಾಲ್ ಜಿಲ್ಲೆಯ ಶಾಲೆಯೊಂದರ ಹೊರಗೆ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದರಿಂದ ಮತ್ತೆ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮೂರು ಸರಕು ಸಾಗಾಣಿಕಾ ಟ್ರಕ್ ಗಳಿಗೆ ಬೆಂಕಿ ಹಚ್ಚಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!