May 5, 2026
Tuesday, May 5, 2026
spot_img

ರಾವೂರ್‌ನಲ್ಲಿ ಶಿವಾಜಿ ಜಯಂತಿ ವೇಳೆ ಕಿರಿಕ್: ಎಂಟು ಜನರ ಮೇಲೆ ‘ಸುಮೋಟೋ’ ಕೇಸ್ ಅಸ್ತ್ರ!

ಹೊಸದಿಗಂತ ಕಲಬುರಗಿ:

ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ವೇಳೆ ಎರಡು ಸಮುದಾಯಗಳ ನಡುವೆ ಉಂಟಾಗಿದ್ದ ಸಂಘರ್ಷಕ್ಕೆ ಸಂಬಂಧಿಸಿದಂತೆ, ವಾಡಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯಾರು ದೂರು ನೀಡಲು ಮುಂದೆ ಬಾರದ ಹಿನ್ನೆಲೆಯಲ್ಲಿ, ಪೊಲೀಸರೇ ಸ್ವಯಂಪ್ರೇರಿತವಾಗಿ (ಸುಮೋಟೋ) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಾಂತಿ ಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಬಿಎನ್‌ಎಸ್‌ಎಸ್ (BNSS) ಕಾಯ್ದೆ 126ರ ಅಡಿ ಎಂಟು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಒಂದು ಸಮುದಾಯದ ಐವರು ಹಾಗೂ ಮತ್ತೊಂದು ಸಮುದಾಯದ ಮೂವರು ಸೇರಿದಂತೆ ಒಟ್ಟು 8 ಜನರ ಮೇಲೆ ಕೇಸ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ.

ಗಲಾಟೆಯ ನಂತರ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ‘ಸುಮೋಟೋ’ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸದ್ಯ ರಾವೂರ್ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !